ರಾಜ್ಯದಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ ಆಡಳಿತ ಶುರುವಾಗಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಆಗಿ ಪರಮೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ , ಡಿ.ಕೆ. ಶಿವಕುಮಾರ್ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು , ನೂತನ ಮುಖ್ಯಮಂತ್ರಿಗೆ ಅಧಿಕಾರ ಗೌಪ್ಯತೆ ಮತ್ತು ಪ್ರಮಾಣವಚನ ಬೋಧಿಸಿದರು.ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದರು. ಉಳಿದಂತೆ ಹಿರಿಯ ಶಾಸಕರಾದ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ ಅವರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣ್ ಪ್ರಕಾಶ್ ಪಾಟೀಲ್ ಅವರೂ , ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಈ ಸಂದರ್ಭದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷದ ನಾಯಕರು , ರಾಜ್ಯದ ಹಲವು ಸಮುದಾಯಗಳ ಮಠಾಧೀಶರು, ಚಿತ್ರರಂಗದ ನಟ-ನಟಿಯರು ಸೇರಿದಂತೆ , ಅಸಂಖ್ಯಾತ ಮಂದಿ ಪಾಲ್ಗೊಂಡಿದ್ದರು.ಬಳಿಕ ವಿಧಾನಸೌಧಕ್ಕೆ ತೆರಳಿ , ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಂತರ ನೂತನ ಸಚಿವರೊಂದಿಗೆ , ಸಚಿವ ಸಂಪುಟ ಸಭೆ ನಡೆಸಿದರು.ಇದಕ್ಕೂ ಮುನ್ನ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧೀಜಿ, ಜಗಜ್ಯೋತಿ ಬಸವೇಶ್ವರ ಸೇರಿದಂತೆ , ವಿವಿಧ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ , ಡಿ.ಕೆ. ಶಿವಕುಮಾರ್ ಅವರನ್ನು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೇಂದ್ರ ಸರ್ಕಾರ , ಕರ್ನಾಟಕ ಸರ್ಕಾರದೊಂದಿಗೆ , ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. #Karnataka #Dkshivakumar #Takeoath#Newcm Share via: Facebook X (Twitter) LinkedIn More Post navigation ನನ್ನ ರಾಜಕೀಯ ಪ್ರಯಾಣದಲ್ಲಿ ಗಾಂಧಿ ಕುಟುಂಬ ನಿರ್ಣಾಯಕ ಪಾತ್ರ- ಡಿಕೆ ಶಿವಕುಮಾರ್ ! ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ- ಡಿಕೆ ಶಿವಕುಮಾರ್ ಘೋಷಣೆ!