ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಮನೆಗಳಿಂದ ಹೊರಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ ಸಂಬಂಧಿತ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಆಡಳಿತ ಮನವಿ ಮಾಡಿದೆ. ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಇಂದು ಜಿಲ್ಲೆಯ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ಕಾಲೇಜುವರೆಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಕಳೆದ ಒಂದು ವಾರದಿಂದ ಎಡೆಬಿಡದೆ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ನಿರಂತರ ಮಳೆಯ ಕಾರಣ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಶಾಲೆಗಳಿಗೆ ರಜೆ ಘೋಷಿಸಿದ್ದು, ಸಾರ್ನವಜನಿಕರು ನದಿ ಮತ್ತು ಸಮುದ್ರ ತೀರದತ್ತ ತೆರಳದೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಜೋಯಿಡಾ ಹಾಗೂ ದಾಂಡೇಲಿನ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಾಂಡೇಲಿ ಹಾಗೂ ಜೋಯಿಡಾ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಹವಾಮಾನ ವೈಪರೀತ್ಯ ಮತ್ತು ನಿರಂತರ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಮನೆಗಳಿಂದ ಹೊರಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ ಸಂಬಂಧಿತ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಆಡಳಿತ ಮನವಿ ಮಾಡಿದೆ. #Dakshinakannada #Uttarkannada #Heavyrain #ದಕ್ಷಿಣಕನ್ನಡ #ಉತ್ತರಕನ್ನಡ #ಭಾರಿ ಮಳೆ Share via: Facebook X (Twitter) LinkedIn More Post navigation ಸಂಪುಟ ವಿಸ್ತರಣೆ: ಇಂದೇ ನೂತನ ಸಚಿವರ ಪಟ್ಟಿ ಅಂತಿಮ ಸಾಧ್ಯತೆ? ಬೆಂಗಳೂರು: 301 ನೇಯ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಲ್ಕರ್ ಜಯಂತಿ!