ಹೆಚ್ ಎಂ ರೇವಣ್ಣ ಮತ್ತಿತರರು


ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಸ್ಥಳೀಯರಲ್ಲಿ ಸಂತಸ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಭವ್ಯವಾದ ದೇವಾಲಯ ನಿರ್ಮಾಣವಾಗಲಿದೆ ಎಂಬ ನಿರೀಕ್ಷೆ ಮೂಡಿದೆ.


ಡಾ. ನಿರ್ಮಲಾನಂದ ಸ್ವಾಮೀಜಿ , ಹೆಚ್ ಎಂ ರೇವಣ್ಣ ಮತ್ತಿತರರು

ತಾವರೆಕೆರೆ: ಮಾಗಡಿ ರಸ್ತೆ ತಾವರೆಕೆರೆಯಲ್ಲಿ  ಹಠಯೋಗಿ ಕಾಳಪ್ಪ ಸ್ವಾಮಿ ಅವರ ನೂತನ ದೇವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ ಅವರು ಹಠಯೋಗಿ ಕಾಳಪ್ಪ ಸ್ವಾಮಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ನೂತನ ದೇವಸ್ಥಾನ ನಿರ್ಮಾಣಕ್ಕೆ ಚಾಲನೆ ನೀಡಿದರು.

ಬಳಿಕ ಬೃಹತ್ ಕ್ರೇನ್ ಮೂಲಕ ದೇವಾಲಯ ನಿರ್ಮಾಣದ ಪ್ರಥಮ ಶಿಲೆಯನ್ನು ಅಡಿಗಲ್ಲಾಗಿ ಹಾಕುವ ಮೂಲಕ ಶಿಲಾನ್ಯಾಸ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ  ಕನಕ ಗುರು ಪೀಠದ ಶಿವಾನಂದ ಪುರಿ ಸ್ವಾಮೀಜಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಜನಸೇವಾ ವಿಶ್ವಸ್ಥ ಮಂಡಳಿಯ ಗೌರವಾಧ್ಯಕ್ಷರಾದ ನಿರ್ಮಲ್ ಕುಮಾರ್ ಜಿ., ತಾವರೆಕೆರೆ ಶ್ರೀ ಹಠಯೋಗಿ ಕಾಳಪ್ಪ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಶಿವಪುತ್ರ ಮಹಾಸ್ವಾಮೀಜಿ ರೇವಣಸಿದ್ದೇಶ್ವರ ಸ್ವಾಮೀಜಿ, ಬೆಳಗಾವಿ ಮರಿಕಟ್ಟೆಯ ಡಾ. ಶ್ರೀ ಸಿದ್ದೇಶ್ವರ ದೇವರು, ಗುಲ್ಬರ್ಗ ಜೇವರ್ಗಿ ತಾಲೂಕಿನ ಶೂನ್ಯ ಸಿಂಹಾಸನ ಪೀಠ ರಾಮಲಿಂಗೇಶ್ವರ ಮಠದ ಸದ್ಗುರು ಪ್ರಣವ ಲಿಂಗ ಮಹಾಸ್ವಾಮೀಜಿ, ಬಸವಾನಂದ ಸ್ವಾಮೀಜಿ ಹಾಗೂ ಸಮಾಜ ಸೇವಕ ಅನಂತರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಸ್ಥಳೀಯರಲ್ಲಿ ಸಂತಸ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಭವ್ಯವಾದ ದೇವಾಲಯ ನಿರ್ಮಾಣವಾಗಲಿದೆ ಎಂಬ ನಿರೀಕ್ಷೆ ಮೂಡಿದೆ.

#Bengaluru #Foundation stone laid #Hathayogi Kalappa Swamy #ಬೆಂಗಳೂರು#ಶಂಕುಸ್ಥಾಪನೆ#ಹಠಯೋಗಿ ಕಾಳಪ್ಪ ಸ್ವಾಮಿ ದೇವಾಲಯ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link