ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಮೌನ ಮುರಿದಿದ್ದು, ತಪ್ಪಿತಸ್ಥರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ವಿಶೇಷ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸುವುದಾಗಿ ಇಂದು ಗುರುವಾರ ಘೋಷಿಸಿದ್ದಾರೆ. ನಮ್ಮ ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಈ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ. Nothing is more important than the welfare and future of our youth!We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this…— Narendra Modi (@narendramodi) July 23, 2026 ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳ ಈ ಘೋಷಣೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಕಾಕ್ರೋಚ್ ಜನತಾ ಪಾರ್ಟಿಯ ನೇತೃತ್ವದಲ್ಲಿ ನಡೆಸುತ್ತಿರುವ ದೀರ್ಘಕಾಲದ ಪ್ರತಿಭಟನೆಯ ನಡುವೆಯೇ ಹೊರಬಿದ್ದಿದೆ. #neetpaperleak #PMMODI #REACT #ನೀಟ್ ಪ್ರಶ್ನೆಪತ್ರಿಕೆ ಸೋರಿಕೆ #ಪ್ರಧಾನಿಮೋದಿ#ಪ್ರತಿಕ್ರಿಯೆ Share via: Facebook X (Twitter) LinkedIn More Post navigation ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಪ್ರಲ್ಹಾದ ಜೋಶಿ ಆರೋಪ! 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ