ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಕಶ್ರೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಟಿ.ಬಿ. ಬಳಗಾವಿ ಅವರು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು: ಕುರುಬ ಸಮಾಜದ ಯುವ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಮಾರ್ಗದರ್ಶನ ಹಾಗೂ ತರಬೇತಿ ಒದಗಿಸುವ ಉದ್ದೇಶದಿಂದ ಕನಕಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಮತ್ತು ಇನ್ಸೈಟ್ಸ್ ಐಎಎಸ್, ಚಂದ್ರಾ ಲೇಔಟ್, ಬೆಂಗಳೂರು ಇವರ ಸಹಯೋಗದಲ್ಲಿ ಗ್ರೂಪ್–ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಈಬೆಂಗಳೂರಿನ ದೊಡ್ಡಬಸ್ತಿ ರಸ್ತೆಯಲ್ಲಿರುವ ಕನಕಶ್ರೀ ಚಾರಿಟಬಲ್ ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀರಾಮಕೃಷ್ಣ ಯೋಗಾಶ್ರಮದ ಯೋಗೇಶ್ವರಾನಂದ ಸ್ವಾಮೀಜಿ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಕಶ್ರೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಟಿ.ಬಿ. ಬಳಗಾವಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಕಾಶ್ ಜಿ.ಪಿ., ಐ.ಆರ್.ಎಸ್ ಹಾಗೂ ಕಾರ್ಮಿಕ ಇಲಾಖೆ ನಿವೃತ್ತ ಅಧಿಕಾರಿ ವಸಂತಕುಮಾರ್ ಎನ್. ಹಿಟ್ಟಣಗಿ ಭಾಗವಹಿಸಿದ್ದರು.ಇನ್ಸೈಟ್ಸ್ ಐಎಎಸ್ ಸಂಚಾಲಕ ನಿರ್ವಾಹಕರಾದ ವಿನಯ್ ಕುಮಾರ್ ಜಿ.ಬಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕುರುಬ ಸಮಾಜದ ಯುವಜನರು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಸೇವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಿಸುವಂತೆ ಪ್ರೋತ್ಸಾಹಿಸುವುದು ಈ ತರಬೇತಿ ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ. ಗುಣಮಟ್ಟದ ತರಬೇತಿ ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಅವಕಾಶ ಕಲ್ಪಿಸುವ ಪ್ರಯತ್ನ ಇದಾಗಿದೆ. ತರಬೇತಿ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಪಡೆದುಕೊಂಡು, ಸರ್ಕಾರಿ ಉದ್ಯೋಗದ ತಮ್ಮ ಕನಸನ್ನು ನನಸಾಗಿಸಿಕೊಳ್ಳಬೇಕು ಎಂಬುದು ಆಯೋಜಕರ ಆಶಯವಾಗಿದೆ. #Bangalore #Kuruba community #competitive examination #training camp #ಬೆಂಗಳೂರು #ಕುರುಬ ಸಮಾಜ #ಸ್ಪರ್ಧಾತ್ಮಕ ಪರೀಕ್ಷೆ #ತರಬೇತಿ ಶಿಬಿರ Share via: Facebook X (Twitter) LinkedIn More Post navigation ಬಾಗಲಕೋಟೆ ಬಳಿ ಭೀಕರ ರಸ್ತೆ ಅಪಘಾತ: ಬೈಕ್ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರು ಸಾವು! ಸೆಪ್ಟೆಂಬರ್ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್