ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ. ರಾಜ್ ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ ನವದೆಹಲಿ: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ- ಸಂಭ್ರಮದಿಂದ ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದರು. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು “ನೋ-ಗೋ ಪ್ರದೇಶಗಳನ್ನು” “ಗೋ-ಅಹೆಡ್ ಪ್ರದೇಶಗಳಾಗಿ” ಪರಿವರ್ತಿಸಿದೆ ಎಂದು ಹೇಳಿದರು. ದೇಶದ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಭಾರತದ ಇಂಧನ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಹೆಚ್ಚಿನ ಅಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದರು. ಕಳೆದ 12 ವರ್ಷಗಳಲ್ಲಿ ದೇಶದ ರಕ್ಷಣಾ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾದಾಗ, ಜಗತ್ತು ಭಾರತವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆಂಪುಕೋಟೆಯಲ್ಲಿ ಭಾಷಣಕ್ಕೂ ಮುನ್ನ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.ವಸಾಹತುಶಾಹಿ ಆಳ್ವಿಕೆಗೆ ಅಂತ್ಯ ಹಾಡಲು ಕಾರಣವಾದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಗೂ ಅವರು ಗೌರವ ಸಲ್ಲಿಸಿದರು. #independenceday #PMModi #Speech #ಸ್ವಾತಂತ್ರ್ಯ ದಿನಾಚರಣೆ#ಪ್ರಧಾನಿಮೋದಿ#ಭಾಷಣ Share via: Facebook X (Twitter) LinkedIn More Post navigation ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ!