ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 158 ರನ್ ಗಳಿಸಿ ಗುಜರಾತ್ ಟೈಟಾನ್ಸ್‌ಗೆ ಗೆಲ್ಲಲು 159 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. 

ಚೆನ್ನೈ: ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಮತ್ತೊಂದು ಸೋಲಾಗಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ  ನಡೆದ ಸೂಪರ್ ಸಂಡೇಯ ಮೊದಲ ಪಂದ್ಯದಲ್ಲಿ  ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟಾನ್ಸ್ 8 ವಿಕೆಟ್ ಗಳಿಂದ ಸೋಲಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 158 ರನ್ ಗಳಿಸಿ ಗುಜರಾತ್ ಟೈಟಾನ್ಸ್‌ಗೆ ಗೆಲ್ಲಲು 159 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. 

ಚೆನ್ನೈ ಪರ ನಾಯಕ ರುತುರಾಜ್ ಗಾಯಕವಾಡ್ 74 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಮತ್ತೊಂದೆಡೆ, ಗುಜರಾತ್ ಪರ ಕಗಿಸೊ ರಬಾಡ ತಮ್ಮ 4 ಓವರ್‌ಗಳಲ್ಲಿ 25 ರನ್‌ಗಳಿಗೆ 3 ವಿಕೆಟ್‌ ಪಡೆದರು. ಅರ್ಷದ್ ಖಾನ್ ಎರಡು ವಿಕೆಟ್‌ಗಳನ್ನು ಪಡೆದರೆ, ಮೊಹಮ್ಮದ್ ಸಿರಾಜ್ ಮತ್ತು ಮಾನವ್ ಸುತಾರ್ ತಲಾ ಒಂದು ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 159 ರನ್‌ಗಳ ಗುರಿಯನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ತಲುಪಿತು. ಗುಜರಾತ್ 8 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಜಿಟಿ 16.4 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 162 ರನ್ ಗಳಿಸಿತು. ಈ ಗೆಲುವಿನಲ್ಲಿ ಸಾಯಿ ಸುದರ್ಶನ್ ಪ್ರಮುಖ ಪಾತ್ರ ವಹಿಸಿದರು. 

ಅವರು 46 ಎಸೆತಗಳಲ್ಲಿ 4 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ ಅದ್ಭುತ 87 ರನ್ ಗಳಿಸಿದರು. ಜೋಸ್ ಬಟ್ಲರ್ ಕೂಡ ಅಜೇಯ 39 ರನ್‌ಗಳನ್ನು ಗಳಿಸಿದರು. ಚೆನ್ನೈ ಪರ ಅಕಿಲ್ ಹುಸೇನ್ ಮತ್ತು ನೂರ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

#IPL2026 #Gujaratwon #CSK #Loss #ಐಪಿಎಲ್ 2026 #ಗುಜರಾತ್ ಗೆಲುವು #ಸಿಎಸ್ ಕೆ #ಸೋಲು

Leave a Reply

Your email address will not be published. Required fields are marked *