ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ, ಶಿಕ್ಷಕರ ಕೊರತೆ ನಿವಾರಣೆ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಯ ಬಗ್ಗೆಯೂ ಯೂ ಸಮಿತಿ ಅಧ್ಯಯನ ನಡೆಸಲಿದೆ. ಯುಟಿ ಖಾದರ್ ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಶೀಲಿಸಿ, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳಿಗೆ ಶಿಫಾರಸುಗಳನ್ನು ನೀಡಲು ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ಸಂಪುಟ ಉಪಸಮಿತಿಯನ್ನು ಸರ್ಕಾರ ರಚಿಸಿದೆ. ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಧಾರದ ಬಳಿಕ ಈ ಸಮಿತಿಯನ್ನು ರಚಿಸಲಾಗಿದ್ದು, ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರನ್ನು ಉಪ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ. The aspirations of our youth will shape Karnataka’s next chapter.From fair and transparent examinations to affordable education, better public institutions, relevant skills, employment opportunities and student wellbeing, every young person deserves an education system that… pic.twitter.com/6M8qcDmy4X— CM of Karnataka (@CMofKarnataka) August 27, 2026 ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ, ಪರೀಕ್ಷಾ ಮತ್ತು ನೇಮಕಾತಿಗೆ ನಿಗದಿತ ವೇಳಾಪಟ್ಟಿ ರೂಪಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಸಮಿತಿ ಪರಿಶೀಲಿಸಲಿದೆ. ಇದರೊಂದಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲಿನ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಶಿಫಾರಸುಗಳನ್ನು ನೀಡಲಿದೆ. ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ, ಶಿಕ್ಷಕರ ಕೊರತೆ ನಿವಾರಣೆ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಯ ಬಗ್ಗೆಯೂ ಯೂ ಸಮಿತಿ ಅಧ್ಯಯನ ನಡೆಸಲಿದೆ. #Karnataka government #Cabinet subcommittee #ministerUT Khader #CMDKS #ಕರ್ನಾಟಕ ಸರ್ಕಾರ#ಸಂಪುಟ ಉಪಸಮಿತಿ#ಸಚಿವ ಯುಟಿ ಖಾದರ್#ಸಿಎಂಡಿಕೆ ಶಿವಕುಮಾರ್ Share via: Facebook X (Twitter) LinkedIn More Post navigation Nepal floods| ಮೃತರಸಂಖ್ಯೆ 162ಕ್ಕೆಏರಿಕೆ; 133 ಮಂದಿ ಭಾರತೀಯರು ಕಣ್ಮರೆ, ಸಹಾಯವಾಣಿ ತೆರೆದ ಕರ್ನಾಟಕ ಸರ್ಕಾರ!Video Nepal flood: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಅನಿವಾಸಿ ಕನ್ನಡಿಗರು ನಾಪತ್ತೆ: ಕಲಬುರಗಿಯ ಇಬ್ಬರು ಸುರಕ್ಷಿತ