ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದಿನಿಂದ (ಸೆಪ್ಟೆಂಬರ್ 21) ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಿದೆ. ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಒಕ್ಕೊರಲಿನಿಂದ ತಿರಸ್ಕರಿಸಿ, ಸದನದಲ್ಲಿ ಐತಿಹಾಸಿಕ ಜಂಟಿ ನಿರ್ಣಯವನ್ನು ಅಂಗೀಕರಿಸುವುದು ಈ ಅಧಿವೇಶನದ ಮುಖ್ಯ ಉದ್ದೇಶವಾಗಿದೆ. ಕೇಂದ್ರ ಪರಿಸರ ಸಚಿವಾಲಯವು ಜುಲೈ 27 ರಂದು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ (ESA) ಸಂಬಂಧಿಸಿದಂತೆ 7ನೇ ಕರಡು ಅಧಿಸೂಚನೆಯನ್ನು ಪ್ರಕಟಿಸಿತ್ತು. ಇದಕ್ಕೆ ಅಧಿಕೃತ ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಈ ಗಡುವಿನ ಒಳಗಾಗಿ ರಾಜ್ಯದ ಕಠಿಣ ನಿಲುವನ್ನು ಕೇಂದ್ರಕ್ಕೆ ತಲುಪಿಸಲು ಸರ್ಕಾರ ಈ ತುರ್ತು ಜಂಟಿ ಅಧಿವೇಶನವನ್ನು ಹಮ್ಮಿಕೊಂಡಿದೆ. ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ಕಸ್ತೂರಿರಂಗನ್ ವರದಿಯ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಕೆಲವು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಪ್ರಸ್ತಾವನೆಯನ್ನು ಈ ಕರಡು ಅಧಿಸೂಚನೆ ಒಳಗೊಂಡಿದೆ. ರೈತರು ಹಾಗೂ ಸ್ಥಳೀಯ ನಿವಾಸಿಗಳ ಮೇಲೆ ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ಎಲ್ಲ ರಾಜಕೀಯ ಪಕ್ಷಗಳೂ ಏಳನೇ ಕರಡು ಅಧಿಸೂಚನೆಯನ್ನು ಬಹುತೇಕ ವಿರೋಧಿಸುತ್ತಿವೆ. ಹೀಗಾಗಿ ಅದರ ವಿರುದ್ಧ ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸುವ ಸಾಧ್ಯತೆಯಿದೆ. ಕೇಂದ್ರ ಸಚಿವಾಲಯದ ಕರಡು ಅಧಿಸೂಚನೆಯ ಪ್ರಕಾರ, 10 ಜಿಲ್ಲೆಗಳ 33 ತಾಲೂಕುಗಳ 1,576 ಗ್ರಾಮಗಳನ್ನು ಒಳಗೊಂಡ ಸುಮಾರು 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಪ್ರಸ್ತಾಪಿಸಲಾಗಿದೆ. ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಮತ್ತು ಬೆಳಗಾವಿ ಜಿಲ್ಲೆಗಳು ಇದರಲ್ಲಿ ಸೇರಿವೆ. #Karnataka special session #Kasturirangan report #Kasturirangan report #ಕರ್ನಾಟಕ ವಿಶೇಷ ಅಧಿವೇಶನ #ಕಸ್ತೂರಿರಂಗನ್ ವರದಿ Share via: Facebook X (Twitter) LinkedIn More Post navigation ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್!ಬೆಳಂಬೆಳಿಗ್ಗೆ ಮನೆ ಮೇಲೆ ದಾಳಿ ಕಾವೇರಿ ಜಲವಿವಾದ: ಕರ್ನಾಟಕಕ್ಕೆ ಸುಪ್ರೀಂ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ!