ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ತೊಂದರೆಯಿಂದಾಗಿ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಸೋಮವಾರ ಬೆಳಗ್ಗೆ ಹೃದಯಾಘಾತವಾಗಿದ್ದು, ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ತೊಂದರೆಯಿಂದಾಗಿ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮಾತನಾಡಿದ ಅವರು, ನನ್ನ ಆಪ್ತ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. “ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನಿನ್ನೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ. ವೈದ್ಯರು ಪರಿಶೀಲನೆ ಮಾಡಿದ್ದಾರೆ. ಅವರು ಆರೋಗ್ಯವಾಗಿದ್ದು, ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಸಂಪೂರ್ಣ ಪರೀಕ್ಷೆಗೆ ನಾವು ವೈದ್ಯರೊಂದಿಗೆ ಚರ್ಚೆ ಮಾಡಿದ್ದೇವೆ. ಎಡಗೈ ಸೆಳೆತ ಬಂದಿದ್ದು, ಮುನ್ನೆಚ್ಚರಿಕೆಯಾಗಿ ಆಸ್ಪತ್ರೆ ಸೇರಿದ್ದಾರೆ” ಎಂದು ಮಾಹಿತಿ ನೀಡಿದರು. ವೈದ್ಯರು ಸರ್ಜರಿಗೆ ಸಲಹೆ ನೀಡಿದ್ದಾರಂತೆ ಎಂದು ಕೇಳಿದಾಗ, “ಅವರ ಆರೋಗ್ಯ ಸುಧಾರಣೆಗೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತಾರೆ” ಎಂದು ತಿಳಿಸಿದರು. #MLA Iqbal Hussain#hospitalised#CMShivakumar#visits hospital Share via: Facebook X (Twitter) LinkedIn More Post navigation ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? – ಸಿಎಂ ಡಿ.ಕೆ. ಶಿವಕುಮಾರ್ Bidadi Township Project: ವಿನಯ್ ಗೌಡ ಎಂಬ ಬೇನಾಮಿ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬ 35 ಎಕರೆ ಜಮೀನು ಪಡೆದಿದೆ- ಎಂ.ಲಕ್ಷ್ಮಣ್ ಆರೋಪ