ಉಭಯ ನಾಯಕರು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಮತ್ತು ಪ್ರಾದೇಶಿಕ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮಾರ್ಕೊ ರುಬಿಯೊ- ಮೋದಿ ಭೇಟಿ ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಉಭಯ ನಾಯಕರು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಮತ್ತು ಪ್ರಾದೇಶಿಕ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ರೂಬಿಯೊ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಭಾರತ ಮತ್ತು ಅಮೆರಿಕ “ಜಾಗತಿಕ ಒಳಿತಿಗಾಗಿ” ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ನಿರಂತರ ಪ್ರಗತಿ ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಭಾರತ ಮತ್ತು ಅಮೆರಿಕ ಜಾಗತಿಕ ಒಳಿತಿಗಾಗಿ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ” ಎಂದು ಮೋದಿ ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿದ್ದಾರೆ. Happy to receive the US Secretary of State, Mr. Marco Rubio.We discussed sustained progress in the India-US Comprehensive Global Strategic Partnership and issues related to regional and global peace and security.India and the United States will continue to work closely for… pic.twitter.com/CuD0DdDXB7— Narendra Modi (@narendramodi) May 23, 2026 ಭಾನುವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸುವ ಮತ್ತು ನವದೆಹಲಿಯಲ್ಲಿ ನಡೆಯುವ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ರೂಬಿಯೊ ಭಾಗವಹಿಸುವ ನಿರೀಕ್ಷೆಯಿದೆ. #newdelhi #pmmodi #Rubio #meeting #ನವದೆಹಲಿ#ಪ್ರಧಾನಿಮೋದಿ #ರುಬಿಯೊ #ಸಭೆ Share via: Facebook X (Twitter) LinkedIn More Post navigation ಇಂದು ಸಂಜೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ! ಅಜೆಂಡಾವೇನು? ಪೆಟ್ರೋಲ್, ಡೀಸೆಲ್ ಬೆಲೆಗಳು ಮತ್ತೆ ಏರಿಕೆ: 2 ವಾರಗಳಲ್ಲಿ ರೂ. 7.5 ಏರಿಕೆ, ವಾಹನ ಸವಾರರು ಕಂಗಾಲು!