ಸಿಎಂ ಸಿದ್ದರಾಮಯ್ಯಸಿಎಂ ಸಿದ್ದರಾಮಯ್ಯ


ಕರ್ನಾಟಕ ಗೃಹ ಮಂಡಳಿ ವತಿಯಿಂದ ಸುಮಾರು 70-75 ಎಕರೆ ಜಾಗದಲ್ಲಿ ಬರೋಬ್ಬರಿ 900 ಕೋಟಿಗೂ ಅಧಿಕ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಇದು 80 ಸಾವಿರ ಆಸನಗಳ ಸಾಮರ್ಥ್ಯ ಹೊಂದಿರಲಿದ್ದು, ದೇಶದಲ್ಲಿ ಎರಡನೇ ದೊಡ್ಡ ಸ್ಟೇಡಿಯಂ ಎನಿಸಲಿದೆ. 

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು

ಆನೇಕಲ್:  ಮನೆ ಹೊಂದಬೇಕು ಎಂಬುದು ಪ್ರತಿಯೊಬ್ಬರ ಕನಸು ಆಗಿರುತ್ತದೆ.  ಈಗ ಭೂಮಿಯ ಬೆಲೆಗಳು ಏರುತ್ತಿರುವುದರಿಂದ, ರಾಜ್ಯ ಗೃಹ ಮಂಡಳಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ವಸತಿ ಸಂಕೀರ್ಣಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು. 

 ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ 4ನೇ ಹಂತದಲ್ಲಿ ನಿರ್ಮಾಣವಾಗಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಕಾಮಗಾರಿಗೆ  ಇಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ,  ಸರ್ವರಿಗೂ ಸೂರು ಒದಗಿಸುವುದು ಸರ್ಕಾರದ ಸಂಕಲ್ಪವಾಗಿದ್ದು, ವಸತಿ ಇಲಾಖೆಯು ಈ ಬಾರಿ ರಾಜ್ಯದಲ್ಲಿ ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಮನೆಗಳು ಮತ್ತು ವಸತಿ ಸಂಕೀರ್ಣಗಳನ್ನು ಒದಗಿಸಿದೆ ಎಂದು ಅವರು ಹೇಳಿದರು.

ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ. ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು ಕೆಹೆಚ್‌ಬಿ ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ದೂರದೃಷ್ಟಿಯಾಗಿದೆ ಹೆಜ್ಜೆಯಾಗಿದೆ. ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹ್ಮದ್ ಅವರು ಅಭಿನಂದನಾರ್ಹರು ಎಂದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಬೆಳೆಯುತ್ತದೆ, ಉದ್ಯೋಗವೂ ಹೆಚ್ಚುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ ಕೆಹೆಚ್‌ಬಿ ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ. ಇದೊಂದು ಮಹತ್ತರ ಬೆಳವಣಿಗೆ ಎಂದು ತಿಳಿಸಿದರು.

ಖಾಲಿ ಇರುವ ಕೆಹೆಚ್‌ಬಿ ನಿವೇಶನಗಳ ಮಾರಾಟದಿಂದ ಕೆಹೆಚ್‌ಬಿ ಗೆ 20 ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕೆಹೆಚ್‌ಬಿ ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದು ಹೇಳಿದರು.

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ.ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದು ತಿಳಿಸಿದರು.

ಭವಿಷ್ಯದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಆಯ್ಕೆಯಾಗಿ ನಿರ್ಮಿಸಲು ಉದ್ದೇಶಿಸಿರುವ ಈ ನೂತನ ಕ್ರೀಡಾಂಗಣ ಇನ್ನೆರಡು ವರ್ಷಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ.

ವಿಶೇಷತೆಗಳೇನುಕರ್ನಾಟಕ ಗೃಹ ಮಂಡಳಿ ವತಿಯಿಂದ ಸುಮಾರು 70-75 ಎಕರೆ ಜಾಗದಲ್ಲಿ ಬರೋಬ್ಬರಿ 900 ಕೋಟಿಗೂ ಅಧಿಕ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಇದು 80 ಸಾವಿರ ಆಸನಗಳ ಸಾಮರ್ಥ್ಯ ಹೊಂದಿರಲಿದ್ದು, ದೇಶದಲ್ಲಿ ಎರಡನೇ ದೊಡ್ಡ ಸ್ಟೇಡಿಯಂ ಎನಿಸಲಿದೆ. ಪ್ರಸ್ತುತ 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ದೇಶದ ಅತಿದೊಡ್ಡ ಸ್ಟೇಡಿಯಂ ಎನಿಸಿದೆ.

#Anekal #internationalcricketstadium #CMSiddaramaiah #kHB #ಆನೇಕಲ್ #ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ #ಸಿಎಂ ಸಿದ್ದರಾಮಯ್ಯ

Leave a Reply

Your email address will not be published. Required fields are marked *