ಬಿಜೆಪಿಗೆ ಸೇರ್ಪಡೆಯಾದ ಎಎಪಿ ಸಂಸದರು


ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಬಿಜೆಪಿ ಸೇರ್ಪಡೆಯಾದ ಎಎಪಿಯ ಸಂಸದರು

ನವದೆಹಲಿಮಹತ್ವದರಾಜಕೀಯಬೆಳವಣಿಗೆಯೊಂದರಲ್ಲಿ  ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್  ಸೇರಿದಂತೆ ಏಳು ಸಂಸದರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಈ ಬೆಳವಣಿಗೆಯಿಂದ ಕೇಜ್ರಿವಾಲ್‌ಗೆ ದೊಡ್ಡ ಆಘಾತ ಉಂಟಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಘವ್ ಚಡ್ಡಾ, ಆಮ್ ಆದ್ಮಿ ಪಕ್ಷದಿಂದ 7 ಸಂಸದರು ಬಿಜೆಪಿಗೆ ಸೇರ್ಪಡೆಯಾಗಲಿದ್ದೇವೆ. “ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ನೇ ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. AAP ಪಕ್ಷ ಏಪ್ರಿಲ್ 2ರಂದು ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ತೆಗೆದುಹಾಕಿತ್ತು.

#NEWDELHI #Raghav Chadha #quit AAP #joinsbjp #ನವದೆಹಲಿ #ರಾಘವ್ ಚಡ್ಡಾ #ಎಎಪಿ ತೊರೆದು #ಬಿಜೆಪಿ ಸೇರ್ಪಡೆ

Leave a Reply

Your email address will not be published. Required fields are marked *