ಪ್ರಿಯಾಂಕಾ ಗಾಂಧಿ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ


ಈ ಬಗ್ಗೆ ಬಿಜೆಪಿ ವ್ಯಂಗ್ಯವಾಡಿತ್ತು. ರಾಹುಲ್ ಗಾಂಧಿ 7 ಕೋಟಿ ಕನ್ನಡಿಗರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿತ್ತು.

ಬೆಂಗಳೂರು: ದೆಹಲಿಯಲ್ಲಿ ಎಸ್ ಐಆರ್ ವಿಷಯದಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನಾ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಪಕ್ಕಕ್ಕೆ ತಳ್ಳಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಈ ಬಗ್ಗೆ ಬಿಜೆಪಿ ವ್ಯಂಗ್ಯವಾಡಿತ್ತು. ರಾಹುಲ್ ಗಾಂಧಿ 7 ಕೋಟಿ ಕನ್ನಡಿಗರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿತ್ತು.

ಇದಕ್ಕೆ ಸ್ವತಃ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಹುಲ್ ಗಾಂಧಿಯವರು ತಮ್ಮನ್ನು ಪಕ್ಕಕ್ಕೆ ತಳ್ಳಿಲ್ಲ, ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ, ತಮ್ಮ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ತಮ್ಮ ಹಿಂದೆ ಬರುತ್ತಿದ್ದ ವಾಹನವನ್ನು ಹತ್ತುವಂತೆ ಸೂಚಿಸಿದ್ದರು ಎಂದು ಹೇಳಿದರು.

ಪ್ರತಿಭಟನೆಯ ವೇಳೆ ಯಾರೂ ನನ್ನನ್ನು ತಳ್ಳಿಲ್ಲ. ಅಲ್ಲಿ ಭಾರೀ ಜನಸಂದಣಿ ಇತ್ತು. ಬಿಜೆಪಿಯವರಿಗೆ ನನ್ನ ಮೇಲೆ ತುಂಬಾ ಪ್ರೀತಿ ಇದೆ. ಅದಕ್ಕಾಗಿಯೇ ಇಂತಹ ಸುಳ್ಳು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ ಎಂದು  ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು

#SIRProtest #Rahulgandhi #DKShivakumar #BJP #ಎಸ್ ಐಆರ್ ಪ್ರತಿಭಟನೆ #ರಾಹುಲ್ ಗಾಂಧಿ#ಡಿಕೆಶಿವಕುಮಾರ#

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link