ಕಲ್ಲು ಬಂಡೆ ಕುಸಿದು ಸಾವು

ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

ರಾಮನಗರ: ಕಲ್ಲು ಕ್ವಾರಿಯಲ್ಲಿ  ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ನಡೆದಿದೆ.

ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್ ಮಾಡಲಾಗುತ್ತಿತ್ತು. ಹೊಸ ಕ್ರಷರ್ ನಡೆಸಲು ಹಿಟಾಚಿ ಡ್ರೈವರ್‌ ಸ್ಥಳ ಕ್ಲೀನ್ ಮಾಡುತ್ತಿದ್ದ. ಈ ವೇಳೆ ಕೆಳಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇದನ್ನ ಗಮನಿಸದ ಹಿಟಾಚಿ ಡ್ರೈವರ್‌ನಿಂದ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಮೃತರೆಲ್ಲರೂ ಬಿಹಾರ ಮತ್ತು ಅಸ್ಸಾಂನ ವಲಸೆ ಕಾರ್ಮಿಕರು ಎಂದು ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಏಳು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದಾಗ್ಯೂ, ರಕ್ಷಣಾ ಮತ್ತು ಪರಿಶೀಲನೆ ಮುಂದುವರಿದಂತೆ, ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ.

#Ramanagara #tragic accident #Rock collapse #Dead #ರಾಮನಗರ #ದುರಂತ #ಬಂಡೆಕುಸಿತ#ಸಾವು

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link