ಕಳೆದ ಕೆಲವರ್ಷಗಳಿಂದ ಅನಿಲ್ ಶೆಟ್ಟಿ ಅವರು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರೀಯಲ್ಲಿ ಅದೃಷ್ಟಪರೀಕ್ಷೆ ಗಿಳಿದಿರುವನಟಹಾಗೂಯುವರಾಜಕಾರಣಿ ಅನಿಲ್ ಶೆಟ್ಟಿ, ಸಮಾಜ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮದೇ ನವ ಬೆಂಗಳೂರ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸಿಗೆ ಸಾಥ್ ಕೊಟ್ಟಿದ್ದಾರೆ. ಕಳೆದ ಕೆಲವರ್ಷಗಳಿಂದ ಅನಿಲ್ ಶೆಟ್ಟಿ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ನವ ಬೆಂಗಳೂರು ಫೌಂಡೇಶನ್ ಕಳೆದ ಹತ್ತು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವೇತನ ನೀಡುತ್ತಾ ಬಂದಿದ್ದಾರೆ. ಇದರ ಮುಂದುವರಿದ ಭಾಗವಾಗಿ ನಿನ್ನೆ ಬೆಂಗಳೂರಿನ ಕೋರಮಂಗಲದ ಸತ್ಯಸಾಯಿಸದನದಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಮಾನುಷಿ ಚಿಲ್ಲರ್ ಹಾಗೂ ಅನಿಲ್ ಶೆಟ್ಟಿ ವಿದ್ಯಾರ್ಥಿಗಳಿಗೆ ವೇತನ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಯ ನಗರ ಶಾಸಕ ಸಿಕೆ ರಾಮಮೂರ್ತಿ, ಎಂಎಲ್ಸಿ ಗೋಪಿನಾಥ್ ರೆಡ್ಡಿ ಹಾಗೂ ನಿರ್ದೇಶಕ ಸಿಂಪಲ್ ಸುನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. #sandalwood #Anilshetty #Manushichiller #Distributescholarship #ಸ್ಯಾಂಡಲ್ ವುಡ್ #ಅನಿಲ್ ಶೆಟ್ಟಿ #ಮಾನುಷಿ ಚಿಲ್ಲರ್ #ಸ್ಕಾಲರ್ ಶಿಪ್ ವಿತರಣೆ Share via: Facebook X (Twitter) LinkedIn More Post navigation ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ!