ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು, ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಸೋನಿಯಾ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿ ಮಾಡಿದ್ದು, ಇಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. Had a cordial meeting with the Leader of Opposition in the Lok Sabha, Shri @RahulGandhi, at his 10 Janpath residence in New Delhi today. pic.twitter.com/xRc6PfyhBR— Siddaramaiah (@siddaramaiah) May 29, 2026 ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಸಿದ್ದು ಭೇಟಿ: ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ಪುತ್ರ ಯತೀಂದ್ರ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು. Had a warm meeting with AICC President Shri Mallikarjun Kharge in New Delhi today.Shri K. J. George, Shri Priyank Kharge, and MLC Dr. Yathindra Siddaramaiah were also present. pic.twitter.com/l44pwy7o9z— Siddaramaiah (@siddaramaiah) May 29, 2026 #newdelhi #siddaramaiah #Rahulgandhi #kharge #ನವದೆಹಲಿ #ಸಿದ್ದರಾಮಯ್ಯ #ರಾಹುಲ್ ಗಾಂಧಿ #ಖರ್ಗೆ Share via: Facebook X (Twitter) LinkedIn More Post navigation ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ! ಸಿದ್ದರಾಮಯ್ಯರಾಜೀನಾಮೆ: ಅಹಿಂದ ಸಮುದಾಯಗಳ ಶಾಸಕರು, ನಾಯಕರ ಮೌನಕ್ಕೆ ಕಾರಣವೇನು?