ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಈ ಗುಂಡಿನ ದಾಳಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೋಲ್ಕತಾ:ಚುನಾವಣೋತ್ತರ ಹಿಂಸಾಚಾರದಿಂದ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಾಥ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಈ ಗುಂಡಿನ ದಾಳಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬಿಜೆಪಿ ಇದನ್ನು “ಗುರಿಯಾಗಿಸಿ ನಡೆಸಿದ ಹತ್ಯೆ” ಎಂದು ಆರೋಪಿಸಿದ್ದು, ಘಟನೆ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮಧ್ಯಮಗ್ರಾಮ, ದೋಹಾರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಇದರ ಬೆನ್ನಲ್ಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ ಸುಮಾರು 10.30ರ ವೇಳೆಗೆ ಚಂದ್ರನಾಥ್ ರಥ್ ಅವರು ಕೊಲ್ಕತ್ತಾದಿಂದ ಮಧ್ಯಮಗ್ರಾಮದಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುತ್ತಿದ್ದರು. ಈ ವೇಳೆ ದೋಲ್ತಾಲಾ ಪ್ರದೇಶದ ಬಳಿ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅವರ ವಾಹನವನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಚಂದ್ರನಾಥ್ ರಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಬುದ್ಧದೇವ್ ಬೆರಾ ಕೂಡ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದಾನೆ. ಅವರಿಗೆ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. #westbengal #Suvendu Adhikari’s Personal Assistant #shot #ಪಶ್ಚಿಮ ಬಂಗಾಳ #ಸುವೇಂದುಅಧಿಕಾರಿಆಪ್ತ #ಗುಂಡೇಟಿಗೆ ಬಲಿ Share via: Facebook X (Twitter) LinkedIn More Post navigation ಉಪ ಚುನಾವಣೆ ಗೆಲುವು ಗ್ಯಾರಂಟಿ ಯೋಜನೆಗಳಿಗೆ ಸಂದ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೀಳು ತುಟಿ ಸಮಸ್ಯೆಗೆ ಉತ್ತಮ ಚಿಕಿತ್ಸೆ ಮತ್ತು ಆರೈಕೆ ಮಗುವಿನ ಹಕ್ಕು: ದಿನೇಶ್ ಗುಂಡೂರಾವ್