ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಎಂಬಿ ಪಾಟೀಲ್ ಬೆಂಗಳೂರು: ವಿಜಯಪುರದಲ್ಲಿ227.91 ಕೋಟಿರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತುಮಾರ್ಜಕ ನಿಯಮಿತದ(ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ‘ಪಾರಂಪರಿಕ ಮೈಸೂರು ಸ್ಯಾಂಡಲ್ ಸೋಪು ಸೇರಿದಂತೆ ಒಟ್ಟು 94 ಬಗೆಯ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಹೊಂದಿರುವ ಕೆಎಸ್ ಡಿಎಲ್ ವಸ್ತುಗಳಿಗೆ ಉತ್ತರ ಕರ್ನಾಟಕ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಅಪಾರ ಬೇಡಿಕೆಯಿದೆ ಎಂದರು. ಇದನ್ನು ಮನಗಂಡು ವಿಜಯಪುರದ ಇಟ್ಟಂಗಿಹಾಳ ಕೈಗಾರಿಕಾಪ್ರದೇಶದಲ್ಲಿ 50 ಎಕರೆ ಜಾಗದಲ್ಲಿ ಸಾಬೂನು ಕಾರ್ಖಾನೆಯ ನೂತನ ಉತ್ಪಾದನಾ ಘಟಕ ಆರಂಭಿಸಲಾಗುವುದು. ಇದರಿಂದ ಆಭಾಗದಲ್ಲಿ ಕೈಗಾರಿಕಾ ಬೆಳವಣಿಗೆ, ಉದ್ಯೋಗಸೃಷ್ಟಿ ಮತ್ತು ಮಾರುಕಟ್ಟೆ ವಿಸ್ತರಣೆ ಸಾಧ್ಯವಾಗಲಿದೆ’ ಎಂದಿದ್ದಾರೆ. 227.91 ಕೋಟಿರೂ.ಗಳಲ್ಲಿಭೂಮಿಖರೀದಿಗೆ30 ಕೋಟಿರೂ, ಉತ್ಪಾದನಾಸ್ಥಾವರನಿರ್ಮಾಣಕ್ಕೆ77.88 ಕೋಟಿರೂ, ಮೂಲಸೌಕರ್ಯವ್ಯವಸ್ಥೆಗೆ24 ಕೋಟಿರೂ, ಯಂತ್ರೋಪಕರಣಗಳಖರೀದಿಗೆ70.80 ಕೋಟಿರೂ, ಟೆಂಡರ್ಪ್ರೀಮಿಯಂಗೆ8.63 ಕೋಟಿರೂ, ಸಾದಿಲ್ವಾರುವೆಚ್ಚಕ್ಕೆ8.63 ಕೋಟಿರೂ, ಮತ್ತುಇತರೆವೆಚ್ಚಗಳಿಗೆಂದು7.97 ಕೋಟಿರೂಮೀಸಲಿಡಲಾಗಿದೆ. ಇಲ್ಲಿಎಕರೆಗೆ59.30 ಲಕ್ಷರೂ. ನಿಗದಿಪಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಸಂಸ್ಥೆಯ ಉತ್ಕರ್ಷಕ್ಕೆ ಕಳೆದ ಮೂರು ವರ್ಷಗಳಿಂದ ಬ್ರ್ಯಾಂಡಿಂಗ್, ಪ್ರಚಾರ, ಮಾರುಕಟ್ಟೆ, ಗುಣಮಟ್ಟನಿರ್ವಹಣೆ, ರಫ್ತುವಹಿವಾಟು, ಇ-ಕಾಮರ್ಸ್ ಸೇರಿದಂತೆ ಹಲವು ಉಪ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪಾಟೀಲ ನುಡಿದಿದ್ದಾರೆ. Post navigation ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ! ಸಿಎಂ ಕೊಟ್ಟ ಸಂದೇಶವೇನು?