ಸಿಎಂಡಿಕೆ ಶಿವಕುಮಾರ್


ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

GKVK ವಿದ್ಯಾರ್ಥಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಬೆೆಂಗಳೂರು: ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಾವಳಿಗಳಲ್ಲಿನ ಗೊಂದಲಗಳಿಗೆ ಸಂಬಂಧಿಸಿದಂತೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿನ ತೊಡಕುಗಳಿಂದ ತಮ್ಮ ಭವಿಷ್ಯಕ್ಕೆ ಆಗುತ್ತಿರುವ ತೊಂದರೆಗಳನ್ನು ವಿದ್ಯಾರ್ಥಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಾತಿ ನಿಯಮಗಳಿಗೆ ತರಲಾದ ಬದಲಾವಣೆಗಳು ಮತ್ತು ತಿದ್ದುಪಡಿಗಳಿಂದಾಗಿ ಕೃಷಿ ಪದವೀಧರರಿಗೆ ಈ ಸಮಸ್ಯೆ ಎದುರಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ನಿಯಮಗಳ ಬದಲಾವಣೆಯಿಂದಾಗಿ ಅರ್ಹ ಕೃಷಿ ಪದವೀಧರರು ಉದ್ಯೋಗಾವಕಾಶಗಳಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ಅವರು ವಿವರಿಸಿದರು.

ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

#CMDKShivakumar #GKVKStudent #Meet #ಸಿಎಂ ಡಿಕೆ ಶಿವಕುಮಾರ್ #ಜಿಕೆವಿಕೆ ವಿದ್ಯಾರ್ಥಿಗಳು#ಭೇಟಿ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link