ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು, ಮೇ 15 ರಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಿದ್ದು, ಅಂದೇ ಪಟ್ಟ ದೊರೆಯಲಿದೆ ಎಂದು ಅವರ ಅಭಿಮಾನಿಗಳು ವಿಶ್ವಾಸದಲ್ಲಿದ್ದಾರೆ. ಈ ಮಧ್ಯೆ ಸಿಎಂ ಬಣದ ನಾಯಕರು ಇದೀಗ ಮುಖ್ಯಮಂತ್ರಿ ರೇಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ತೇಲಿಬಿಟ್ಟಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹರಿಯಾಣ ಉಸ್ತುವಾರಿ ಆಗಿರುವ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದು, ಪ್ರಸ್ತಕ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಬಳಿಕ ಸುದ್ದಿಸಂಸ್ಥೆ ANI ಜೊತೆಗೆ ಬಿಕೆ. ಹರಿಪ್ರಸಾದ್ ಮಾತನಾಡಿದ್ದು, ಇದೊಂದು ಸೌಜನ್ಯಯುತ ಭೇಟಿಯಾಗಿತ್ತು. ಇದರಲ್ಲಿ ಯಾವುದೇ ಕುತೂಹಲವಿಲ್ಲ. ಪಶ್ಚಿಮ ಬಂಗಾಳ ಚುನಾವಣೆ ಮತ್ತು ಹರಿಯಾಣ ರಾಜ್ಯಸಭಾ ಚುನಾವಣೆಗಳಲ್ಲಿ ನಿರತನಾಗಿದ್ದರಿಂದ 3 ತಿಂಗಳಿನಿಂದ ಸಿಎಂ ಭೇಟಿಯಾಗಿರಲಿಲ್ಲ. ಇದೊಂದು ಕೇವಲ ಸೌಜನ್ಯದ ಭೇಟಿ ಹೊರತು ಬೇರೇನೂ ಅಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಬಿ.ಕೆ. ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಅವರೇ ಹೈಕಮಾಂಡ್, ಅವರು ನೀಡಿದ ಹೇಳಿಕೆಯೇ ಅಂತಿಮ. ಅವರು ಹೇಳಿದ್ದನ್ನು ಯಾರೂ ಅರ್ಥೈಸುವ ಅಗತ್ಯವಿಲ್ಲ. ಕಾಂಗ್ರೆಸ್ ಅಧ್ಯಕ್ಷರು ಹೇಳಿಕೆ ನೀಡಿದಾಗ, ನಾಯಕತ್ವ ಬದಲಾವಣೆ ವಿಷಯದ ಬಗ್ಗೆ ಯಾವುದೇ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬೇಡಿಕೆ ಕುರಿತು ಮಾತನಾಡಿದ ಹರಿಪ್ರಸಾದ್, ಇದು ಇದು ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ನ ವಿಶೇಷಾಧಿಕಾರ. ಅವರು ನಿರ್ಧರಿಸಬೇಕು ಎಂದರು. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಗಳ ನಂತರ, ಎಲ್ ಪಿಜಿ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದರು. ಹೆಚ್ಚಿನ ಬಿಜೆಪಿ ನಾಯಕರು ಅವರ ಹೇಳಿಕೆಯನ್ನು ಅಪಹಾಸ್ಯ ಮಾಡಿದ್ದರು. ಆದರೆ ಈಗ ಅವರು ಸರಿಯಾಗಿಯೇ ಹೇಳಿದ್ದಾರೆ ಎಂದು ಸಾಬೀತಾಗಿದೆ ಎಂದು ಹೇಳಿದರು. #Karnataka #leadershipchange #cmsiddaramaiah #BKHariprasad #Meeting #ಕರ್ನಾಟಕ #ನಾಯಕತ್ವ ಬದಲಾವಣೆ #ಸಿಎಂ ಸಿದ್ದರಾಮಯ್ಯ# ಬಿಕೆ ಹರಿಪ್ರಸಾದ್ #ಮಾತುಕತೆ Post navigation ತುಮಕೂರು: H5N1 ಸೋಂಕಿನಿಂದ 44 ನವಿಲುಗಳ ಸಾವು, ICAR ವರದಿ! ಪ್ರಸ್ತಾವನೆಯಲ್ಲಿ ಅತಿಯಾದ ಬೇಡಿಕೆ: ಇರಾನ್ ವಿರುದ್ಧ ಟ್ರಂಪ್ ಕಿಡಿ!