23ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 21,866 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಒಟ್ಟು 97,941 ಮತಗಳು ಲಭಿಸಿದ್ದರೆ, ಬಿಜೆಪಿ ಅಭ್ಯರ್ಥಿಗೆ 76,075 ಮತಗಳು ಬಂದಿವೆ. ಉಮೇಶ್ ಮೇಟಿ ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. 23ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 21,866 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಒಟ್ಟು 97,941 ಮತಗಳು ಲಭಿಸಿದ್ದರೆ, ಬಿಜೆಪಿ ಅಭ್ಯರ್ಥಿಗೆ 76,075 ಮತಗಳು ಬಂದಿವೆ. ಮತ ಎಣಿಕೆ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಂತಿಮ ಸುತ್ತಿನಲ್ಲೂ ಭಾರೀ ಅಂತರದ ಗೆಲುವು ದಾಖಲಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲ್ ಎರಚಿ ಸಂಭ್ರಮಾಚರಣೆ ನಡೆಸಿದರು. #Bagalakote #Bypolls # Congress #Umeshmeti #win #ಬಾಗಲಕೋಟೆ #ಉಪ ಚುನಾವಣೆ #ಕಾಂಗ್ರೆಸ್ #ಉಮೇಶ್ ಮೇಟಿ #ಗೆಲುವು Post navigation ಉಪಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ 9 ನೇ ಸುತ್ತಿನಲ್ಲಿ ಬಿಜೆಪಿಗೆ ಹಿನ್ನಡೆ! ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ. ಸುಧಾಕರ್ ಅಂತ್ಯಕ್ರಿಯೆ!