ಕೆಂಗೇರಿ ಬಳಿ ರಾಮೋಹಳ್ಳಿ ಗೇಟ್ನಲ್ಲಿ ರಸ್ತೆ ಕೆಳಸೇತುವೆ ಕಾಮಗಾರಿ ಉತ್ತಮವಾಗಿ ಸಾಗುತ್ತಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಹಿಂಭಾಗದಲ್ಲಿ ಪಾದಚಾರಿ ಸಬ್ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಸಚಿವ ವಿ. ಸೋಮಣ್ಣ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಚಿವ ಕೃಷ್ಣಬೈರೇಗೌಡ, ಸಂಸದ ಪಿ.ಸಿ. ಮೋಹನ್ ಮತ್ತಿತರರುಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ವಿ. ಸೋಮಣ್ಣನವರು, ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂದೆ ಪಾದಚಾರಿ ಸಬ್ವೇಯನ್ನು ಅಂದಾಜು₹5.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ಯೋಜನೆಯಿಂದ ಪಾದಚಾರಿಗಳು ಸುರಕ್ಷಿತವಾಗಿ ರೈಲ್ವೆ ಹಳಿ ದಾಟಲು ಸಹಾಯವಾಗುತ್ತದೆ ಎಂದರು. ಕೆಂಗೇರಿ ಬಳಿ ರಾಮೋಹಳ್ಳಿ ಗೇಟ್ನಲ್ಲಿ ರಸ್ತೆ ಕೆಳ ಸೇತುವೆ ಕಾಮಗಾರಿ ಉತ್ತಮವಾಗಿ ಸಾಗುತ್ತಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ವಿ. ಸೋಮಣ್ಣ ಹೇಳಿದರು. ಬೆಂಗಳೂರಿನ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದಲ್ಲಿ ಪಾದಚಾರಿ ಸುರಂಗಮಾರ್ಗ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಜನರ ಓಡಾಟ ಅತಿ ಹೆಚ್ಚಿರುವ ಮಲ್ಲೇಶ್ವರದ ಮಂತ್ರಿಮಾಲ್ ಪ್ರದೇಶದಲ್ಲಿ ಪಾದಚಾರಿ ಸುರಂಗ ಮಾರ್ಗ ನಿರ್ಮಾಣಕ್ಕೆ ಬಹು ದಿನಗಳ ಬೇಡಿಕೆಯಿತ್ತು. ಇದೀಗ, ಸಬ್ ವೇ ನಿಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು,… pic.twitter.com/oPBzEOnDfS— V. Somanna (@VSOMANNA_BJP) July 6, 2026 ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ವೇಗವಾಗಿ ಸಾಗಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ಅಂದಾಜು ₹485 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲಾಗುತ್ತಿದೆ. ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಕಾರ್ಯವೂ ಸಹ ತ್ವರಿತವಾಗಿನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಯಲಹಂಕದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ಅನ್ನುಸಹಅಭಿವೃದ್ಧಿಪಡಿಸಲುಯೋಜಿಸಲಾಗಿದೆ ಎಂದರು. #Bengaluru #VSomanna #PedestrianSubway #foundation stone #ಬೆಂಗಳೂರು#ವಿಸೋಮಣ್ಣ#ಪಾದಚಾರಿಸಬ್ ವೇ #ಶಂಕುಸ್ಥಾಪನೆ Share via: Facebook X (Twitter) LinkedIn More Post navigation ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! SIR ಅಕ್ರಮ; ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು!