ನಿಖಿಲ್ ಕುಮಾರಸ್ವಾಮಿ


ನೈಸ್ ಅಕ್ರಮ ವಿಚಾರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂದರು.

ಬಂಗಾರಪೇಟೆ: ನೈಸ್‌ ಅಕ್ರಮಗಳ ಬಗ್ಗೆ ಹೈಕೋರ್ಟ್‌ ಆದೇಶ ನೀಡಿದ್ದರೂ ಕಾಂಗ್ರೆಸ್‌ ಸರ್ಕಾರ ಕ್ರಮಕೈಗೊಳ್ಳದೆ ಯಾಕೆ ಸುಮ್ಮನಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ರೈತ ಸ್ವಾಭಿಮಾನಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ನೈಸ್ ಅಕ್ರಮ ವಿಚಾರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂದರು.

ಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ  ಕುರಿತು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ ಕೇರಳದಲ್ಲಿ ಗೆದ್ದಾಗ ಎಲ್ಲವೂ ಸರಿ, ಸೋತಲ್ಲಿ ಮಾತ್ರ ಮತಗಳ್ಳತನ ಆರೋಪವೇ ?  ಚುನಾವಣಾ ಆಯೋಗದ ಮುಂದೆ ಸಿಎಂ ಡ್ರಾಮಾ ಹಾಸ್ಯಾಸ್ಪದ ಎಂದು ಲೇವಡಿ ಮಾಡಿದರು.

ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ, ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಿಲ್ಲದೆ ನಮ್ಮ ರೈತರು ಅನುಭವಿಸುತ್ತಿರುವ ನೋವು ನಿಜಕ್ಕೂ ಮನಕಲಕುವಂತಿದೆ. ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಕಿವಿಗೊಡುತ್ತಿಲ್ಲ. ಆದರೆ ಜೆಡಿಎಸ್ ಪಕ್ಷ ರೈತರ ಪರವಾಗಿ ಸದಾ ಇರುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

#Nice illegalities #HighCourtissued orders #Nikhil Kumaraswamy #Congress #ನೈಸ್ ಅಕ್ರಮ#ಹೈಕೋರ್ಟ್ ಆದೇಶ#ನಿಖಿಲ್ ಕುಮಾರಸ್ವಾಮಿ #ಕಾಂಗ್ರೆಸ್

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link