ಅಭಿಜೀತ್ ದಿಪ್ಕೆ

ಸಂಘಟನೆಯ ಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನೂರಾರು ಯುವಕರು ಜಿರೆಳೆಯ ಮಾಸ್ಕ್ ಧರಿಸಿ ಭಾಗವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಅಭಿಜೀತ್ ದೀಪ್ಕೆ

ನವದೆಹಲಿ: “ನೀವು ನಮ್ಮ ಆನ್‌ಲೈನ್ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ,ನಮ್ಮನ್ನು ಅಳಿಸಲು ಸಾಧ್ಯವಿಲ್ಲ” ಎಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಶನಿವಾರ ಹೇಳಿದ್ದು, ಈ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

NEET 2026 ಪೇಪರ್ ಸೋರಿಕೆ ಹಾಗೂ CBSE ಪರೀಕ್ಷಾ ಮಂಡಳಿಯ ಅಕ್ರಮಗಳನ್ನು ವಿರೋಧಿಸಿ ಕಾಕ್‌ರೋಚ್ ಜನತಾ ಪಕ್ಷ (Cockroach Janta Party) ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಆರಂಭಿಸಿದೆ.

ಸಂಘಟನೆಯ ಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನೂರಾರು ಯುವಕರು ಜಿರೆಳೆಯ ಮಾಸ್ಕ್ ಧರಿಸಿ ಭಾಗವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸರ್ಕಾರ ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಚಟುವಟಿಕೆಗಳನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.ನನ್ನ ಸ್ನೇಹಿತರೇ, ಇದು ದೀರ್ಘ ಹೋರಾಟ. ನಾವು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನ್ ಅವರ ರಾಜೀನಾಮೆಯನ್ನು ಒತ್ತಾಯಿಸಲು ಪ್ರಾರಂಭಿಸಿ ಒಂದು ತಿಂಗಳಾಗಿದೆ, ಆದರೆ ಈ ವ್ಯಕ್ತಿಗಳು ಎಷ್ಟು ನಾಚಿಕೆಯಿಲ್ಲದವರೆಂದರೆ, ಕ್ರಮ ತೆಗೆದುಕೊಳ್ಳುವ ಬದಲು, ಅವರು ನಮ್ಮ ಖಾತೆಗಳನ್ನು ಹ್ಯಾಕ್ ಮಾಡುವುದು ಮತ್ತು ನಮ್ಮ ಪೋಸ್ಟ್‌ಗಳನ್ನು ಅಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೀವು ನಮ್ಮ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ, ನಮ್ಮನ್ನು ಈ ಹೋರಾಟದಿಂದ ಅಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದೇ ವೇಳೆ ಅಮೆರಿಕದಿಂದ ಭಾರತಕ್ಕೆ ಬಂದ ದಿನವನ್ನು ಸ್ಮರಿಸಿರುವ ದೀಪ್ಕೆ, ವಿಮಾನ ದೆಹಲಿಯಲ್ಲಿ ಇಳಿಯುವ ಮುನ್ನ, ಸ್ವಾತಂತ್ರ್ಯದ ಕೊನೆಯ ಕ್ಷಣಗಳನ್ನು ಅನುಭವಿಸುತ್ತಿರುವಂತೆ ಭಾಸವಾಯಿತು. ಈ ಹೋರಾಟಕ್ಕಾಗಿ ನನ್ನ ಸ್ವಾತಂತ್ರ್ಯವನ್ನೇ ತ್ಯಾಗ ಮಾಡಲು ನಾನು ಸಿದ್ಧನಾಗಿದ್ದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link